ಮತದಾನ ಜಾಗೃತಿಗಾಗಿ ಮತದಾರರ ಜಾಗೃತ ವೇದಿಕೆ ಸ್ಥಾಪನೆ: ಪ್ರಸನ್ನ ಹೆಚ್

ಉಡುಪಿ: ಮತದಾರರೆಲ್ಲಾ ಮತಗಟ್ಟೆಗಳಿಗೆ ತೆರಳಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ಸಲುವಾಗಿ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಜಾಗೃತ ವೇದಿಕೆಯನ್ನು ಸ್ಥಾಪಿಸಲಾಗಿದ್ದು, ಕಚೇರಿಯ ಮುಖ್ಯಸ್ಥರು ಇದರ ಅಧ್ಯಕ್ಷರಾಗಿದ್ದು, ಉಳಿದ ಸಿಬ್ಬಂದಿಗಳು ಸದಸ್ಯರಾಗಿರುತ್ತಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲೆಯ ಸ್ವೀಪ್ ಸಮಿತಿ ಅಧ್ಯಕ್ಷ ಪ್ರಸನ್ನ ಹೆಚ್ ಹೇಳಿದರು. ಅವರು ಮಂಗಳವಾರ ಮತದಾರರ ಜಾಗೃತಿ ವೇದಿಕೆಗಳ ಸದಸ್ಯರಿಗೆ ಆನ್‌ಲೈನ್ ವೆಬಿನಾರ್ ಮೂಲಕ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ ಸಾಲಿಗಿಂತ ಶೇ. 10 […]