ಮುಸ್ಲಿಂ ಬಾಲಕಿಯರ ಪ್ರತ್ಯೇಕ ಶಾಲೆ ವಿಚಾರ ಚರ್ಚೆ ಆಗಿಲ್ಲ; ವಕ್ಫ್ ಬೋರ್ಡ್ ಅಧ್ಯಕ್ಷರ ಹೇಳಿಕೆ ವೈಯಕ್ತಿಕ: ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಮುಸ್ಲಿಂ ಬಾಲಕಿಯರಿಗಾಗಿಯೇ 10 ಹೊಸ ಕಾಲೇಜುಗಳನ್ನು ಸ್ಥಾಪಿಸುವ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ನಿರ್ಧಾರಕ್ಕೆ ಪ್ರತಿಯಾಗಿ ಕರ್ನಾಟಕದಲ್ಲಿ ವ್ಯಾಪಕ ಪ್ರತಿಭಟನೆ ನಡೆಸುವುದಾಗಿ ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿದ್ದರಿಂದ ವಿವಾದ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಈ ವಿಚಾರ ತನಗೆ ತಿಳಿದಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗಾಗಿ 10 ಕಾಲೇಜುಗಳನ್ನು ತೆರೆಯಲು ಸರ್ಕಾರವು ಒಪ್ಪಿಗೆ ನೀಡಿದೆ ಎಂಬ ಕರ್ನಾಟಕ ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನಾ ಶಾಫ್ತಿ ಸಾದಿ ಅವರ ಹೇಳಿಕೆಯನ್ನು ಕರ್ನಾಟಕ […]

ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾಗಿ ಅಬ್ದುಲ್ ಖಾದರ್ ಕುಕ್ಕಿಕಟ್ಟೆ ನೇಮಕ

ಉಡುಪಿ: ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಅಬ್ದುಲ್ ಮುತಾಲಿ ಇವರು ಈಗಾಗಲೇ ಉಡುಪಿ ಜಿಲ್ಲಾ ವಕ್ಛ್ ಬೋರ್ಡಿನ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಸೂಚನೆ ಮೇರೆಗೆ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಲಾಗಿದ್ದು, ರಿಕ್ತ ಸ್ಥಾನಕ್ಕೆ ಅಬ್ದುಲ್ ಖಾದರ್ ಕುಕ್ಕಿಕಟ್ಟೆ ಅವರನ್ನು ನೇಮಕ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.