ಮತ ರಹಸ್ಯ ಬಯಲು ಮಾಡಿದರೆ ಕಠಿಣ ಕ್ರಮ: ಡಿಸಿ ಎಚ್ಚರಿಕೆ

ಉಡುಪಿ: ಜಿಲ್ಲೆಯಲ್ಲಿ ವಿವಿಧ ಖಾಸಗಿ ಟಿವಿ ವಾಹಿನಿಗಳು, ಲೋಕಸಭಾ ಚುನಾವಣೆಯ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆಯುವ ಕಾರ್ಯಕ್ರಮ ನಡೆಸುತ್ತಿದ್ದು,  ನಿಮ್ಮ ಮತ ಯಾರಿಗೆ? ಎಂದು ನೇರವಾಗಿ ಮತದಾರರನ್ನು ಪ್ರಶ್ನಿಸಿ ಅಭಿಪ್ರಾಯ ಸಂಗ್ರಹಿಸಿ ಪ್ರಸಾರ ಮಾಡುತ್ತಿದ್ದು, ಇದು ಚುನಾವಣಾ ಗೋಪ್ಯತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಅಭಿಪ್ರಾಯ ಸಂಗ್ರಹಣೆ ನಡೆಸಿದರೆ ಸಂಬಂದಪಟ್ಟ ವಾಹಿನಿ ಹಾಗೂ ಸಾರ್ವಜನಿಕರ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಾಪಾಟಿ ಎಚ್ಚರಿಕೆ ನೀಡಿದ್ದಾರೆ. ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ […]