ಜಗದೀಶ್ ಅಧಿಕಾರಿ ವಿರುದ್ಧ ನಾವು ತಾಂಟಲು ಸಿದ್ಧ: ಪ್ರತಿಭಾ ಕುಳಾಯಿ

ಮಂಗಳೂರು: ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯರ ಬಗ್ಗೆ ಮತ್ತು ಬಿಲ್ಲವ ಸಮಾಜದ ಕುರಿತು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ನೀಡಿರುವ ಅವಹೇಳನಕಾರಿ ಹೇಳಿಕೆಗೆ ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಜಗದೀಶ್ ಅಧಿಕಾರಿ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಜಗದೀಶ್ ಅಧಿಕಾರಿ ನಮ್ಮ ಗರಡಿಗೆ ಬಂದು ತಪ್ಪು ಕಾಣಿಕೆ ಹಾಕಿ ಸಮಾಜದ ಮುಂದೆ ಬಹಿರಂಗ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅಧಿಕಾರಿ ವಿರುದ್ಧ […]