ತುಳು ರಾಜ್ಯದ ಬೇಡಿಕೆಗೆ ನಮ್ಮ ಬೆಂಬಲವಿಲ್ಲ: ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ನಾವೆಲ್ಲರೂ ಕರ್ನಾಟಕದವರು, ಪ್ರತ್ಯೇಕ ತುಳು ರಾಜ್ಯದ ಬೇಡಿಕೆ ನಮ್ಮ ಮುಂದಿಲ್ಲ. ಕುಚೋದ್ಯದ ಬೇಡಿಕೆ ಮತ್ತು ಆಶಯಗಳಿಗೆ ನಮ್ಮ ಯಾವುದೇ ಬೆಂಬಲ ಕೂಡ ಇಲ್ಲ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇಂದು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಏಕೀಕರಣವಾದ ಮೇಲೆ ನಾವೆಲ್ಲ ಒಟ್ಟಾಗಿ ಇರಬೇಕು. ನಮ್ಮಲ್ಲಿನ ಒಡಕಿನ ಮಾತುಗಳನ್ನು ಮಹಾರಾಷ್ಟ್ರ ದುರುಪಯೋಗ ಮಾಡುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ತುಳು ಭಾಷೆಗೆ ಗೌರವ ಸಿಗಬೇಕು. ತುಳು ಭಾಷೆಯ ಮಾನ್ಯತೆಗೆ ನಮ್ಮ ಹೋರಾಟ ಇದೆ […]