ಕಾರ್ಕಳ: ಡಿ. 29 ರಂದು ಬಜಗೋಳಿಯಲ್ಲಿ ಔಷಧಿ ಸಸ್ಯಗಳ ಕ್ಷೇತ್ರೋತ್ಸವ

ಕಾರ್ಕಳ: ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ಕರ್ನಾಟಕ ಜೀವವೈವಿಧ್ಯ ಮಂಡಳಿ ಹಾಗೂ ಕಾಂಪ್ಕೋ ಮಂಗಳೂರು ಇವರ ಸಹಯೋಗದಲ್ಲಿ ರಾಷ್ಟ್ರೀಯ ಔಷಧಿ ಗಿಡಮೂಲಿಕಾ ಮಂಡಳಿ ಪ್ರಾಯೋಜಿತ ಯೋಜನೆ ಅಡಿಯಲ್ಲಿ ಪಶ್ಚಿಮ ಘಟ್ಟದ ತಪ್ಪಲಿನ ಔಷಧಿ ಸಸ್ಯಗಳ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ 29 ರಂದು ಕಾರ್ಕಳ ತಾಲೂಕು ಬಜಗೋಳಿಯ ತ್ರಿಭುವನ ಮಾಳ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಔಷಧಿ ಸಸ್ಯಗಳ ಕೃಷಿಯ ಅವಶ್ಯಕತೆ ಮತ್ತು ಪ್ರಾಮುಖ್ಯತೆ, ಅಡಿಕೆ ಮತ್ತು ತೆಂಗಿನ ತೋಟದಲ್ಲಿ ಅಂತರ ಬೆಳೆಯಾಗಿ ಬೆಳೆಯಲು ಸೂಕ್ತವಾದ ಔಷಧಿ ಸಸ್ಯಗಳ […]

ರಾಜ್ಯದ ಮಳೆ ಪಟ್ಟಿಯಲ್ಲಿ ಉಡುಪಿಗೆ ಅಗ್ರಸ್ಥಾನ: ಆಗುಂಬೆಯ ಸ್ಥಾನವನ್ನು ಕಿತ್ತುಕೊಂಡ ಕರಾವಳಿ ಜಿಲ್ಲೆಯ ಭಾರೀ ಮಳೆಗೆ ಅರಣ್ಯ ನಾಶ ಕಾರಣ!

ಉಡುಪಿ: ತೀರ್ಥಹಳ್ಳಿ ತಾಲೂಕಿನ ಆಗುಂಬೆ ಎಡೆಬಿಡದೆ ಸುರಿಯುವ ಭಾರೀ ಮಳೆಗೆ ಹೆಸರುವಾಸಿಯಾಗಿದ್ದು, ದಕ್ಷಿಣ ಭಾರತದ ಚಿರಾಪುಂಜಿ ಎನ್ನುವ ಬಿರುದನ್ನು ಗಳಿಸಿರುವ ವಿಷಯ ಎಲ್ಲರಿಗೂ ತಿಳಿದಿರುವಂತಹದ್ದೆ. ಆದರೆ, ಇದೀಗ ಆಗುಂಬೆಯ ಕೈಯಿಂದ ಈ ಬಿರುದನ್ನು ಉಡುಪಿ ಜಿಲ್ಲೆಯು ಕಸಿದುಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ ಎಂದು ವಿಜ್ಞಾನಿಗಳು ಅಭಿಪ್ರಾಯ ಪಟ್ಟಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಕೆಎಸ್‌ಡಿಎಂಎ) ಅಂಕಿಅಂಶಗಳ ಪ್ರಕಾರ, 2015 ಮತ್ತು 2021 ರ ನಡುವೆ ಕಳೆದ ಏಳು ವರ್ಷಗಳಲ್ಲಿ ಇಡೀ ರಾಜ್ಯಕ್ಕೆ ಹೋಲಿಸಿದಲ್ಲಿ ಉಡುಪಿ ಜಿಲ್ಲೆಯ ವಿವಿಧ ಸ್ಥಳಗಳು […]