ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟು ಶಂಕೆ: ದ.ಕ. ಎಸ್ಪಿಗೆ ದೂರು ನೀಡಿದ ಪತಿ

ಮಂಗಳೂರು: ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟಿರುವ ಶಂಕೆಯ ಹಿನ್ನೆಲೆಯಲ್ಲಿ ಪತಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನ ನೆರಿಯ ಗ್ರಾಮದ ಚಿದಾನಂದ ಕೆ.ಆರ್. ಎಂಬವರು ಪತ್ನಿಯ ವಿರುದ್ಧ ದೂರು ನೀಡಿದ್ದಾರೆ. ಇವರ ಪತ್ನಿ ರಾಜಿ ರಾಘವನ್ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಜುಲೈ 11ಕ್ಕೆ ಮತ್ತೆ ಊರಿಗೆ ಬಂದಿದ್ದು, ಮಗಳನ್ನು ತನ್ನೊಂದಿಗೆ ಕಳುಹಿಸಿಕೊಡಬೇಕು ಎಂದು ಒತ್ತಾಯಿಸುತ್ತಿದ್ದಾಳೆ. ಇದಕ್ಕೆ ಆಕೆಯ ಅಕ್ಕನ ಕುಮ್ಮಕ್ಕಿದೆ ಎಂದು ಪತಿ […]