ಚಲಿಸುತ್ತಿದ್ದ ಆಟೊದಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ಸುಳ್ಯ: ಚಲಿಸುತ್ತಿದ್ದ ಆಟೊ ರಿಕ್ಷಾದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ದುಗ್ಗಲಡ್ಕ ನೀರಬಿದಿರೆಯ ಕೊಯಿಕುಳಿ ಶಾಲಾ ಬಳಿ ನಡೆದಿದೆ. ಮೃತರನ್ನು ಲಲಿತಾ (40) ಎಂದು ಗುರುತಿಸಲಾಗಿದೆ. ಇವರು ಸುಳ್ಯದ ತಮ್ಮ ಸಂಬಂಧಿಕರ ಮನೆಗೆ ಬರುತ್ತಿದ್ದ ವೇಳೆ ಏಕಾಏಕಿಯಾಗಿ ರಿಕ್ಷಾದಿಂದ ರಸ್ತೆಗೆ ಬಿದ್ದಿದ್ದರು. ಇದರಿಂದ ಲಲಿತಾ ಗಂಭೀರ ಗಾಯಗೊಂಡಿದ್ದು, ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.