ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಮೃತ್ಯು

ಬಂಟ್ವಾಳ: ಯುವತಿಯೋರ್ವಳು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ಸಜೀಪ ಮೂಡಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ. ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತಾ (24) ಮೃತ ದುರ್ದೈವಿ. ಇವರು ಇಂದು ಬೆಳಿಗ್ಗೆ ದೇವರ ಪೂಜೆಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.