ಮಾರ್ಗ ಮಧ್ಯೆಯೇ ಹೆಣ್ಣುಮಗುವಿಗೆ ಜನ್ಮ ನೀಡಿದ ಮಹಿಳೆ

ಅಣೆಹೊಲ: ಹೆರಿಗೆಗಾಗಿ ಆಸ್ಪತ್ರೆಗೆ ಕಾಲ್ನಡಿಗೆಯಲ್ಲಿ ಬರುತ್ತಿರುವ ಸಂದರ್ಭದಲ್ಲಿ ಗರ್ಭಿಣಿಯೊಬ್ಬರು ಮಾರ್ಗ ಮಧ್ಯೆಯೇ ಹೆಣ್ಣುಮಗುವಿಗೆ ಜನ್ಮ ನೀಡಿದ ಘಟನೆ ಮಹದೇಶ್ವರ ಸಮೀಪದ ಆಣೆಹೊಲ ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಗ್ರಾಮದ ವೀರಣ್ಣ ಎಂಬುವವರ ಪತ್ನಿ ಕಮಲ ಅವರು ಗರ್ಭಿಣಿಯಾಗಿದ್ದರು. ಗುರುವಾರ ರಾತ್ರಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅವರ ಮನೆಗೆ ಸರಿಯಾದ ರಸ್ತೆ ಇಲ್ಲದೇ ಇರುವುದರಿಂದ ಬೆಟ್ಟದಲ್ಲಿರುವ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ನಡೆದುಕೊಂಡೇ ಬರಲು ಮನೆಯಿಂದ ಇಬ್ಬರೂ ಹೊರಟಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಮನೆಯಿಂದ 250 ಮೀಟರ್‌ […]