ವಂಡ್ಸೆ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾ ಸಭೆ

ಬೈಂದೂರು: ಬಿಜೆಪಿ ಬೈಂದೂರು ಮಂಡಲದ ವಂಡ್ಸೆ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾ ಸಭೆಯು ಚಿತ್ತೂರಿನ ಮೂಕಾಂಬಿಕಾ ಸಭಾಗೃಹದಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮಾತನಾಡಿ, ಮಹಿಳೆಯರು ಸಂಘಟಿತರಾದಲ್ಲಿ ಮಾತ್ರ ಸಬಲೀಕರಣ ಸಾಧ್ಯ. ಆದ್ದರಿಂದ ಮಹಿಳೆಯರು ಪಕ್ಷ ಸಂಘಟನೆಗೆ ಹೆಚ್ಚು ಗಮನ ಕೊಡಬೇಕು ಎಂದು ಹೇಳಿದರು. ಹಾಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸಿದ ವಂಡ್ಸೆ ಮಹಾಶಕ್ತಿ ಕೇಂದ್ರ […]