ರಾಜ್ಯದಲ್ಲೂ ಮಹಿಳಾ ವಕೀಲರ ಸಂಖ್ಯೆ ಹೆಚ್ಚಾಗಿದೆ: ಸಿ.ಎಂ. ಜೋಶಿ

ಉಡುಪಿ ನ್ಯಾಯಾಲಯದಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ಮಹಿಳಾ ಸಿಬ್ಬಂದಿ ಇದ್ದು, ಶೇ. 30ಕ್ಕಿಂತಲೂ ಹೆಚ್ಚು ಮಹಿಳಾ ವಕೀಲರಿದ್ದಾರೆ. ರಾಜ್ಯದಲ್ಲೂ ಶೇ. 30ಕ್ಕಿಂತ ಹೆಚ್ಚು ಮಹಿಳೆಯರು ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿದ್ದಾರೆ. ಲಿಂಗ ಸಮಾನತೆಯ ಅನುಷ್ಠಾನದಲ್ಲಿ ನಾವು ಅನೇಕ ಹೆಜ್ಜೆಗಳನ್ನು ಇಟ್ಟಿದ್ದು, ದೇಶದ ಸಂವಿಧಾನ ಹಾಗೂ ಕಾನೂನುಗಳು ಕೂಡ ಈ ದಿಸೆಯಲ್ಲಿ ಹಿಂದೆ ಬಿದ್ದಿಲ್ಲ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಸಿ.ಎಂ. ಜೋಶಿ ಹೇಳಿದರು. ಉಡುಪಿ ವಕೀಲರ ಸಂಘ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ […]