ಕುಂದಾಪುರ: ವಿಶ್ವ ರಕ್ತದಾನಿಗಳ ದಿನಾಚರಣೆ ನಿಮಿತ್ತ ರಕ್ತದಾನಿಗಳಿಗೆ ಸನ್ಮಾನ

ಕುಂದಾಪುರ: ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ವತಿಯಿಂದ ರಕ್ತದಾನ‌ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯಿತು. ವೇದಿಕೆಯಲ್ಲಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಇದರ ಸದಸ್ಯರು ಹಾಗೂ ರಕ್ತದಾನಿಗಳಾದ ಅರವಿಂದ ಉಪ್ಪಿನಕುದ್ರು, ಮಹೇಂದ್ರ ಉಪ್ಪಿನಕುದ್ರು, ದಿನೇಶ್ ಕಾಂಚನ್ ಬಾರಿಕೇರೆ,ರೇಷ್ಮಾ ಮಾರ್ಟಿಸ್ ಶಂಕರಪುರ, ಆದರ್ಶ್ ಉಪ್ಪಿನಕುದ್ರು, ಗೌರೀಶ್ ಹಳ್ಳಿಹೊಳೆ ಇವರನ್ನು ಸನ್ಮಾನಿಸಲಾಯಿತು. ಅಭಯಹಸ್ತ ಟ್ರಸ್ಟ್ ಕಳೆದ ಮೂರು ವರ್ಷಗಳಲ್ಲಿ ರಕ್ತದಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ವಿವಿಧ ಸಂಘಟನೆಗಳ ಸಹಕಾರದಲ್ಲಿ ಉಡುಪಿ […]

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನ ಆಚರಣೆ

ಮಣಿಪಾಲ: “ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ” ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ ಸಂಬಂಧಿತ ಉತ್ಪನ್ನಗಳು ಜಗತ್ತಿನಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕವಾಗಿವೆ. ಈ ದಿನವು ಸ್ವಯಂಸೇವಕರು ಮತ್ತು ರಕ್ತದಾನಿಗಳಿಗೆ ಅವರ ಕೊಡುಗೆಗಳಿಗಾಗಿ ಧನ್ಯವಾದ ಹೇಳುವ ಅವಕಾಶವನ್ನು ಸೂಚಿಸುತ್ತದೆ. 2023 ರ ಘೋಷ ವಾಕ್ಯ “ರಕ್ತ ನೀಡಿ, ಪ್ಲಾಸ್ಮಾ ನೀಡಿ, ಜೀವನವನ್ನು ಹಂಚಿಕೊಳ್ಳಿ, ಆಗಾಗ ಹಂಚಿಕೊಳ್ಳಿ”. ವಿಶ್ವ ಆರೋಗ್ಯ ಸಂಸ್ಥೆಯ […]