ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಿಂದ ವಿಶ್ವ ರಕ್ತದಾನಿಗಳ ದಿನಾಚರಣೆ

ಮಣಿಪಾಲ: ರಕ್ತದಾನ ಮತ್ತು ಸುರಕ್ಷಿತ ರಕ್ತ ಮತ್ತು ರಕ್ತ ಉತ್ಪನ್ನಗಳ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವತಿಯಿಂದ ವಿಶ್ವ ರಕ್ತದಾನಿಗಳ ದಿನ ಕಾರ್ಯಕ್ರಮ ಆಯೋಜಿಸಲಾಯಿತು. ಕೋವಿಡ್ -19 ನಿಯಮಾವಳಿಗಳನ್ನು ಅನುಸರಿಸಿ, ರಕ್ತದಾನಿಗಳನ್ನು ಪ್ರೇರೇಪಿಸಲು ಹೆಚ್ಚಿನ ಕೊಡುಗೆ ನೀಡಿದ ಜನರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಶರತ್ ಕೆ ರಾವ್ ಅವರು, ಈ ವರ್ಷದ ಧ್ಯೇಯವಾದ ‘ರಕ್ತ ನೀಡಿ […]