ಬಾಲ ಕಾರ್ಮಿಕ ಪದ್ದತಿ ಸಂಪೂರ್ಣವಾಗಿ ನಿರ್ಮೂಲವಾಗಲಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ಪತ್ತೆ ಹಚ್ಚಿ, ಅವರನ್ನು ದುಡಿಮೆಯಿಂದ ಮುಕ್ತಗೊಳಿಸಿ ಸೂಕ್ತ ಪುರ್ನವಸತಿ ಕಲ್ಪಿಸಿ ವಿದ್ಯಾಭ್ಯಾಸಕ್ಕೆ ಸಕಲ ವ್ಯವಸ್ಥೆಗಳನ್ನು ಒದಗಿಸುವ ಮೂಲಕ ಬಾಲ ಕಾರ್ಮಿಕ ಪದ್ದತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ […]