ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಪರಿಸರ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಜೀವನಮೌಲ್ಯ ಕಾರ್ಯಾಗಾರ

ಕಟಪಾಡಿ: ಜೂನ್ 5 ರಂದು ಇಲ್ಲಿನ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾಲೇಜಿನ ಸಿಬ್ಬಂದಿ ಶಶಿಕಿರಣ್ ಆಚಾರ್ಯ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿಯ ಅರಿವು ಮೂಡಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಪರಿಸರ ರಕ್ಷಣೆಯ ಕುರಿತಾದ ಬೀದಿ ನಾಟಕವನ್ನು ಪ್ರದರ್ಶಿಸಿ ಮಕ್ಕಳಿಗೆ ಪರಿಸರ ರಕ್ಷಣೆ ಮಹತ್ವ ತಿಳಿಸಿದರು. ತ್ರಿಶಾ ಸಂಸ್ಥೆಯ ಅಧ್ಯಕ್ಷ ಸಿ.ಎ ಗೋಪಾಲಕೃಷ್ಣ ಭಟ್ ಹಾಗೂ ಪ್ರಾಧ್ಯಾಪಕರಿಗೆ ಗಿಡವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜು ಹಾಗು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರು, ಬೋಧಕ […]

ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ : ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸೋಮವಾರದಂದು ಆಚರಿಸಲಾಯಿತು. ಉಡುಪಿ ಅರಣ್ಯ ಸಂಚಾರಿದಳದ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಜಿ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಇಂದು ಪ್ರಕೃತಿ ವಿನಾಶದ ಅಂಚಿನೆಡೆಗೆ ಸಾಗುತ್ತಿದೆ. ಪ್ರಕೃತಿಗೆ ಪ್ರತಿಯೊಂದು ಗಿಡವೂ ಅತ್ಯಗತ್ಯ. ಪ್ರತಿಯೊಬ್ಬರೂ ಕನಿಷ್ಠ ಎರಡು ಗಿಡಗಳನ್ನಾದರೂ ನೆಟ್ಟು ಪ್ರಕೃತಿಯನ್ನು ಸಂರಕ್ಷಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಮೇರಿಯನ್ ಡಿಸೋಜ ಮಾತನಾಡಿ, ಹಿಂದೆ ನಮ್ಮ ಪ್ರಕೃತಿಯು ಬಹಳ ಸುಂದರವಾಗಿತ್ತು. ಆದರೆ […]

ವಿಶ್ವ ಪರಿಸರ ದಿನಾಚರಣೆ: ಚಾಣಕ್ಯ ಟ್ಯುಟೋರಿಯಲ್ ವಿದ್ಯಾರ್ಥಿಗಳಿಂದ ಗಿಡನಾಟಿ

ಹೆಬ್ರಿ: ಜೂ.5ರಂದು ಹೆಬ್ರಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಂದ ಗಿಡನಾಟಿ ಮಾಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಅಧ್ಯಕ್ಷ ಉದಯಕುಮಾರ್ , ಪ್ರಾಂಶುಪಾಲೆ ವೀಣಾ ಯು.ಶೆಟ್ಟಿ ,ಪೂಣಿ೯ಮಾ ಶೆಟ್ಟಿ, ಕೃಷ್ಣ ಶೆಟ್ಟಿ , ಪ್ರೇಮಾ ಕೆ.ಶೆಟ್ಟಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಕಳದಲ್ಲೊಂದು ವಿನೂತನ ಗೃಹಪ್ರವೇಶ: ಅತಿಥಿಗಳಿಗೆ ಗಿಡಗಳನ್ನು ನೀಡಿ ಪರಿಸರ ದಿನಾಚರಣೆ ಮಾಡಿದ ಕುಟುಂಬ!

ಕಾರ್ಕಳ: ನಗರದ ಗಾಂಧಿ ಮೈದಾನದ ಬಳಿ ಇರುವ ಶಾಂಭವಿ ಡಿವೈನ್ ಸಂಕೀರ್ಣದಲ್ಲಿ ಜೂನ್ 5ರಂದು ಕುಂಜಾಲಿನ ಶ್ರೀಮತಿ ಚಿತ್ರ ಮತ್ತು ಸತೀಶ್ ಪ್ರಭು ಇವರ ‘ಶ್ರೀ ವರದರಾಜ’ ಗೃಹಪ್ರವೇಶದ ಅಂಗವಾಗಿ ಆಗಮಿಸಿದ ಎಲ್ಲ ಅತಿಥಿಗಳಿಗೆ ಹೂವಿನ ಮತ್ತು ಹಣ್ಣಿನ ಗಿಡಗಳನ್ನು ನೀಡಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಸುರೇಶ್ ಶೆಣೈ ಬಜಗೋಳಿ ಸಂಯೋಜಿಸಿದರು.

ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ

ಉಡುಪಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಇವರ ಸಹಯೋಗದಲ್ಲಿ, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪರಿಸರ ಜಾಥಾ ಮತ್ತು ಸಭಾ ಕಾರ್ಯಕ್ರಮವು ಜೂನ್ 5 ರಂದು ಬೆಳಗ್ಗೆ 10 ಗಂಟೆಗೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ […]