ಮಂಗಳೂರು: ಸ್ನೇಹಾಲಯ ಚಾರಿಟೆಬಲ್ ಟ್ರಸ್ಟ್ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನ

ಮಂಗಳೂರು: ಭರವಸೆಯ ಬೆಳಕಾಗಿರುವ ಸ್ನೇಹಾಲಯ ಚಾರಿಟೆಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಬೆಂದೂರಿನಲ್ಲಿರುವ ಲೋಟಸ್ ಪ್ಯಾರಡೈಸ್ ನಲ್ಲಿ “ವಿಶ್ವ ಮಾನಸಿಕ ಆರೋಗ್ಯ ದಿನ” 2023 ವನ್ನು ಆಚರಿಸಲಾಯಿತು. ಮಂಗಳೂರು ಮತ್ತು ಕೇರಳ ಗಡಿ ಭಾಗದ ಒಂಬತ್ತು ಪ್ರತಿಷ್ಠಿತ ಕಾಲೇಜುಗಳ 250 ಉತ್ಸಾಹಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮಾನಸಿಕ ಆರೋಗ್ಯದ ಸಮಸ್ಯೆಗಳ ಮೇಲೆ ಮೂವರು ಗಣ್ಯ ವೈದ್ಯಕೀಯ ತಜ್ಞರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವು ದೀಪ ಬೆಳಗುವುದರೊಂದಿಗೆ ಪ್ರಾರಂಭವಾಯಿತು. ಮಂಗಳೂರಿನ ಯೇನೆಪೋಯ ಮೆಡಿಕಲ್ ಕಾಲೇಜಿನಲ್ಲಿ ಎಂ ಡಿ ಮತ್ತು […]
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ: ಆರೋಗ್ಯ ಸಿಬ್ಬಂದಿಗಳಲ್ಲಿ ಒತ್ತಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಗಾರ

ಉಡುಪಿ: ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ, ಡಾ ಎ ವಿ ಬಾಳಿಗಾ ಸ್ಮಾರಕ ಆಸ್ಪತ್ರೆ, ಕಮಲ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ‘ಆರೋಗ್ಯ ಸಿಬ್ಬಂದಿಗಳಲ್ಲಿ ಒತ್ತಡ ನಿರ್ವಹಣೆ’ ಕುರಿತು ಮಾಹಿತಿ ಕಾರ್ಯಗಾರವನ್ನು ಸೋಮವಾರದಂದು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ ಎ […]
ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಅಕ್ಟೋಬರ್ 10 ರಂದು ವಿಶ್ವ ಮಾನಸಿಕ ಆರೋಗ್ಯ ದಿನದ ನಿಮಿತ್ತ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಅತಿಥಿಗಳಾಗಿ ಭಾಗವಹಿಸಿದ್ದ ಉಪ ಡಿ.ವೈ.ಎಸ್.ಪಿ ವಿಜಯ ಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯ ಅತೀ ಮುಖ್ಯ. ಸ್ಪಸ್ಥ ಮನಸ್ಸಿಗಾಗಿ ಜೀವನದಲ್ಲಿ ಒಳ್ಳೆಯ ದಿನಚರಿಯನ್ನು ಅಳವಡಿಸಿಕೊಳ್ಳಬೇಕು ಮತ್ತು ಹಿರಿಯರ ಮಾರ್ಗದರ್ಶನವನ್ನು ಪಡೆದುಕೊಳ್ಳಬೇಕು. ಜೀವನದಲ್ಲಿ ಒಳ್ಳೆಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಅತೀ ಅವಶ್ಯ ಎಂದರು. ಕಾಪು ಸಬ್ ಇನ್ಸ್ಪೆಕ್ಟರ್ ಶ್ರೀಶೈಲ ಡಿ., ಸಬ್ ಇನ್ಸ್ಪೆಕ್ಟರ್ ಗಳಾದ ಶ್ರೀಮತಿ ಮಮತಾ ಮತ್ತು […]