ಭಾವನೆಗಳ ಅಭಿವ್ಯಕ್ತಿಗೆ ಮಾತೃಭಾಷೆ ಸೂಕ್ತ: ಪ್ರೊ. ಪಿ. ಗಿರಿಧರ ಕಿಣಿ

ಮಣಿಪಾಲ: ನಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಮಾತೃಭಾಷೆಯಂಥ ಸೂಕ್ತ ಮಾಧ್ಯಮ ಮತ್ತೊಂದಿಲ್ಲ. ಪ್ರಸ್ತುತ ಮಾತೃಭಾಷೆಯಲ್ಲಿ ಪ್ರಾಥಮಿಕ ಶಾಲೆಯ ಬೋಧನಾ ವಿಧಾನಕ್ಕೆ ಸರಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಮಾತೃಭಾಷಾ ದಿನವನ್ನು ಬಹುಭಾಷೆಯಲ್ಲಿ ಶಿಕ್ಷಣ ಒದಗಿಸುವ ಧ್ಯೇಯದೊಂದಿಗೆ ಆಚರಿಸುವ ಸಂಕಲ್ಪವನ್ನು ಯುನೆಸ್ಕೋ ಹೊಂದಿದೆ. ಈ ದಿನದಂದು ಸಾಹಿತ್ಯ- ಕಲೆಗಳಿಗೆ ಸಂಬಂಧಿಸಿದ ಅಂತರ್‌ಶಿಸ್ತೀಯ ಮಹತ್ತ್ವದ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸುತ್ತಿರುವುದು ಅರ್ಥಪೂರ್ಣ ಎಂದು ಮಣಿಪಾಲ್‌ ಅಕಾಡೆಮಿ ಹೈಯರ್ ಎಜುಕೇಶನ್‌ನ ರಿಜಿಸ್ಟ್ರಾರ್‌ ಪ್ರೊ. ಪಿ. ಗಿರಿಧರ ಕಿಣಿ ಅಭಿಪ್ರಾಯ ವ್ಯಕ್ತಪಡಿಸಿದರು. ಮಾಹೆಯ […]