ಮುನಿಯಾಲ್ ಆಯುರ್ವೇದ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಉಡುಪಿ: ಮುನಿಯಾಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಮುನಿಯಾಲ್ ಯೋಗ ಮತ್ತು ನ್ಯಾಚುರೋಪತಿ ಕಾಲೇಜು ಇದರ ಜಂಟಿ ಆಶ್ರಯದಲ್ಲಿ 9ನೇ ಅಂತಾರಾಷ್ಟೀಯ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಡಾ.ಗಣಪತಿ ಜೋಯಿಸ, (ನಿವೃತ್ತ ಮುಖ್ಯಸ್ಥರು, ಯೋಗ ವಿಭಾಗ, ಕೆ ಎಂ ಸಿ ಮಣಿಪಾಲ), ಮುನಿಯಾಲ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಸತ್ಯನಾರಾಯಣ ಬಿ, ಮುನಿಯಾಲ್ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲ ಡಾ.ಅಪರ್ಣ ಸುರೇಂದ್ರ, ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಚಂದ್ರಕಾಂತ್ ಭಟ್, ಸ್ನಾತಕ ಪೂರ್ವ ವಿಭಾಗದ […]

ವ್ಯಕ್ತಿಯ ಸರ್ವಾಂಗೀಣ ಆರೋಗ್ಯಕ್ಕಾಗಿ ಪ್ರತಿನಿತ್ಯ ಯೋಗಾಭ್ಯಾಸ ಉತ್ತಮ: ಯಶ್‌ಪಾಲ್ ಸುವರ್ಣ

ಉಡುಪಿ: ಯೋಗ ಮನುಷ್ಯನ ದೈಹಿಕ, ಮಾನಸಿಕ, ಆಧ್ಯಾತ್ಮಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಉತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗಾಭ್ಯಾಸವನ್ನು ಮಾಡಬೇಕೆಂದು ಶಾಸಕ ಯಶ್‌ಪಾಲ್ ಸುವರ್ಣ ಕರೆ ನೀಡಿದರು. ಅವರು ಬುಧವಾರದಂದು ನಗರದ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು […]

ಉಡುಪಿ: ಬಾಲಕಿಯರ ಸರ್ಕಾರಿ ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಯೋಗ ದಿನಾಚರಣೆ

ಉಡುಪಿ: ದೈಹಿಕ ಅಂಗ ಸಾಧನೆಯೊಂದಿಗೆ ಚಿತ್ತವೃತ್ತಿ ನಿಯಂತ್ರಣವೇ ಯೋಗದ ಆದ್ಯಗುರಿ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಯೋಗ ತುಂಬಾ ಸಹಕಾರಿ. ಆದ್ದರಿಂದ ವಿದ್ಯಾರ್ಥಿಗಳು ಯೋಗಾಭ್ಯಾಸದತ್ತ ಒಲವು ತೋರಬೇಕು ಎಂದು ಉಡುಪಿ ಪತಂಜಲಿ ಯೋಗ ಸಮಿತಿಯ ಶ್ರೀಮತಿ ವೇದಾವತಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಅವರು ವಿಶ್ವ ಯೋಗ ದಿನಾಚರಣೆ ಅಂಗವಾಗಿ ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಎನ್ಎಸ್ಎಸ್ ಮತ್ತು ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ಯೋಗ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟು ಮಾತನಾಡಿದರು. ಪತಂಜಲಿ ಸಮಿತಿಯ […]

ಉಡುಪಿ ಜಿಲ್ಲಾ ಬಿಜೆಪಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಆಚರಿಸಲಾಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜ್ಯೋತಿ ಬೆಳಗಿಸಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, […]

ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ವಿಶ್ವ ಯೋಗ ದಿನಾಚರಣೆ

ಉಡುಪಿ: ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಬುಧವಾರ ಪ್ರಾತಃಕಾಲ ಜಗನ್ನಾಥ ಸಭಾಭವನದಲ್ಲಿ ಶ್ರೀಕೃಷ್ಣ ಯೋಗ ಕೇಂದ್ರ ಬ್ರಹ್ಮಗಿರಿ ಇದರ ಯೋಗ ಶಿಕ್ಷಕಿ ಶ್ರೀಮತಿ ಪ್ರೀತಿ ಮನೋಹರ ಶೆಟ್ಟಿ ಯೋಗ ಪ್ರದರ್ಶನ ಮತ್ತು ತರಬೇತಿ ನೀಡಿದರು. ಸಹ ಶಿಕ್ಷಕಿಯರಾದ ಸ್ಯಾಂಡ್ರಾ ಕ್ರಾಸ್ತಾ ಹಾಗೂ ಭಾರತಿ ಹೆಗ್ಡೆ ಸಹಕರಿಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಯೋಗ ಶಿಕ್ಷಕಿಯರನ್ನು ಗೌರವಿಸಿದರು. ಸೊಸೈಟಿಯ ಉಪಾಧ್ಯಕ್ಷ ಎಲ್ ಉಮಾನಾಥ, ಆಡಳಿತ […]