ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ: ಯಡಿಯೂರಪ್ಪ ಭವಿಷ್ಯ

ಬೆಂಗಳೂರು: ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಾದಿ ಅಂತ್ಯವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮಂಗಳವಾರ ಭವಿಷ್ಯ ನುಡಿದಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಯಡಿಯೂರಪ್ಪ ಅವರು ಚಾಮರಾಜನಗರ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರಿಗೆ 60,000 ಮತಗಳ ಮುನ್ನಡೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಮತದಾರರಿಗೆ ಕರೆ ನೀಡಿದ್ದನ್ನು ಉಲ್ಲೇಖಿಸಿ ಮಾತನಾಡಿದರು. ಸಿದ್ದರಾಮಯ್ಯನವರು ತಮ್ಮ ಸಮಯ […]