ಕಾಶ್ಮೀರದಲ್ಲಿ ಅನುರಣಿಸಿತು ಕರಾವಳಿಯ ಗಂಡುಕಲೆ ಯಕ್ಷಗಾನ!! ನವರಾತ್ರಿಗೆ ವೈಷ್ಣೋದೇವಿ ಮಂದಿರದಲ್ಲಿ ಪ್ರದರ್ಶನಕ್ಕೆ ಗವರ್ನರ್ ರಿಂದ ಆಹ್ವಾನ!

ಶ್ರೀನಗರ: ಅ.2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್‌ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ದೆಹಲಿ ಘಟಕ, ಸುಳ್ಯದ ಬೆಳ್ಳಾರೆಯ ನಿನಾದ ಸಾಂಸ್ಕೃತಿಕ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರದ ಕಲೆ, ಸಂಸ್ಕೃತಿ ಮತ್ತು ಭಾಷಾ ಇಲಾಖೆ ವತಿಯಿಂದ ಹಿಂದಿ ಯಕ್ಷಗಾನ ಮತ್ತು ಪಜ್ಜೆ-ಗೆಜ್ಜೆ ತುಳು-ಕನ್ನಡ ಶಾಸ್ತ್ರೀಯ, ಜಾನಪದ ನೃತ್ಯ ಪ್ರಕಾರ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕರ್ನಾಟಕದ 2 ಕಲಾ […]