ಯಕ್ಷಗಾನ ಅಕಾಡೆಮಿ: ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ವತಿಯಿಂದ ಯಕ್ಷಗಾನ (ತೆಂಕು, ಬಡಗು, ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ  ಕಲಾ ಪ್ರಕಾರಗಳಲ್ಲಿ 2021 ನೇ ಸಾಲಿನ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಪ್ರಕಟಿಸಿರುವ ಪುಸ್ತಕಗಳಿಗೆ ಬಹುಮಾನ ನೀಡಲು ಲೇಖಕ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯೊಂದಿಗೆ ಪುಸ್ತಕಗಳ 4 ಪ್ರತಿಗಳನ್ನು ರಿಜಿಸ್ಟ್ರಾರ್ ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಲು ಫೆ. 23 ಕೊನೆಯ […]