ಯಡಿಯೂರಪ್ಪ ಅವರನ್ನು ಹೆದರಿಸಿ ರಾಜೀನಾಮೆ ಪಡೆದಿದ್ದಾರೆ: ಸಿದ್ದರಾಮಯ್ಯ

ಬೆಳಗಾವಿ: ಬಿ.ಎಸ್. ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ. ಬಿಜೆಪಿ ವರಿಷ್ಠರು ಅವರನ್ನು ಹೆದರಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಬೆಳಗಾವಿ ಪ್ರವಾಸಿಮಂದಿರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019ರಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ಮುಖ್ಯಮಂತ್ರಿಯೇ ರಾಜೀನಾಮೆ ನೀಡಿದ್ದಾರೆ. ಇದು ಕರ್ನಾಟಕದ ದುರ್ದೈವವೆ ಸರಿ. ಯಡಿಯೂರಪ್ಪ ಕೇರ್‌ ಟೇಕರ್‌ ಮುಖ್ಯಮಂತ್ರಿಯಾಗಿದ್ದಾರೆ. ಈಗ ಮಂತ್ರಿಮಂಡಲವೇ ಇಲ್ಲ. ಇಂತಹ ಸಂದರ್ಭದಲ್ಲಿ ಪಡೆದದ್ದು ಸರಿಯಲ್ಲ ಎಂದರು.