ನಾಳೆ ಮಣಿಪಾಲ ಎಂಡ್ ಪಾಯಿಂಟ್ ನಲ್ಲಿ ಯೋಗಥಾನ್ ಕಾರ್ಯಕ್ರಮ

ಮಣಿಪಾಲ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಡಾ. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಯೋಗಥಾನ್ ಕಾರ್ಯಕ್ರಮವು ಜನವರಿ 15 ರಂದು ಬೆಳಗ್ಗೆ 7 ಗಂಟೆಗೆ ಮಣಿಪಾಲದ ಎಂಡ್ ಪಾಯಿಂಟ್‌ನಲ್ಲಿ ನಡೆಯಲಿದೆ. ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ […]
ಸೆಪ್ಟಂಬರ್ 17 ರಂದು ಯೋಗಥಾನ್: 15000 ಮಂದಿಯಿಂದ ಏಕಕಾಲದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ

ಉಡುಪಿ: ಸೆಪ್ಟಂಬರ್ 17 ರಂದು 15000 ಮಂದಿಯಿಂದ ಏಕಕಾಲದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಲಿದ್ದು, ಈ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸೂಚಿಸಿದರು. ಅವರು ಶುಕ್ರವಾರ ಉಡುಪಿ ತಾಲೂಕು ಕಚೇರಿ ಸಭಾಂಗಣದಲ್ಲಿ, ಯೋಗಾಥಾನ್ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರವು ಈಗಾಗಲೇ ಯೋಗವನ್ನು ಶಾಲಾ ಮತ್ತು ಕಾಲೇಜು ಶಿಕ್ಷಣದಲ್ಲಿ ಪಠ್ಯವನ್ನಾಗಿ ಸೇರ್ಪಡೆ ಮಾಡಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ […]
ಆಗಸ್ಟ್ 12 ರಿಂದ 14 ರವರೆಗೆ ಜಿಲ್ಲಾಮಟ್ಟದ ಯೋಗಾಥಾನ್: 10000 ಜನರಿಗೆ ಏಕಕಾಲದಲ್ಲಿ ತರಬೇತಿ

ಉಡುಪಿ: ಜನಸಾಮಾನ್ಯರಲ್ಲಿ ಯೋಗದ ಮಹತ್ವ ಹಾಗೂ ಅದರಿಂದ ದೇಹಕ್ಕೆ ಆಗುವ ಪ್ರಯೋಜನ ಕುರಿತು ಅರಿವು ಮೂಡಿಸುವುದು ಸೇರಿದಂತೆ ಯೋಗವನ್ನು ನಿತ್ಯ ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಲು ಆಗಸ್ಟ್ 12, 13 ಮತ್ತು 14 ರಂದು ಯೋಗಾಥಾನ್ ಕಾರ್ಯಕ್ರಮವನ್ನು ಜಿಲ್ಲಾಮಟ್ಟದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ, ಯೋಗಾಥಾನ್ ಕಾರ್ಯಕ್ರಮ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುವ ಯೋಗಾಥಾನ್ ಕಾರ್ಯಕ್ರಮಕ್ಕೆ […]