ಕ್ರಿಕೆಟ್ ಆಡುತ್ತಿದ್ದ ವೇಳೆ ಕುಸಿದುಬಿದ್ದು ಯುವಕ ಮೃತ್ಯು

ಕಾರ್ಕಳ: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕನೋರ್ವ ಕುಸಿದುಬಿದ್ದು ಮೃತಪಟ್ಟ ಘಟನೆ ನಂದಳಿಕೆ ಗ್ರಾಮದ ಮೈದಾನದಲ್ಲಿ ಬುಧವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಹಾಳೆಕಟ್ಟೆ ನಿವಾಸಿ ಸುಕೇಶ್ ಶೆಟ್ಟಿ (27) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ರಜೆಯ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದನು ಎನ್ನಲಾಗಿದೆ. ನಿನ್ನೆ ಸಂಜೆ ಸ್ನೇಹಿತರೊಂದಿಗೆ ಸೇರಿ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಬೌಲಿಂಗ್ ಮಾಡುವ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.