ಇಂದು ಹಸೆಮಣೆ ಏರಬೇಕಿದ್ದ ಯುವಕ ಕೊರೊನಾಗೆ ಬಲಿ

ಚಿಕ್ಕಮಗಳೂರು: ಇಂದು ಹಸೆಮಣೆ ಏರಬೇಕಿದ್ದ ಯುವಕ ಕೋವಿಡ್-19 ಸೋಂಕಿಗೆ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಪೃಥ್ವಿರಾಜ್ (32) ಎಂದು ಗುರುತಿಸಲಾಗಿದೆ. ಪೃಥ್ವಿರಾಜ್ ಅವರಿಗೆ ಇಂದು ಮದುವೆ ನಿಗದಿಯಾಗಿತ್ತು. ಎಲ್ಲವೂ ಸರಿಯಾಗಿದ್ದರೆ ಪೃಥ್ವಿರಾಜ್ ಮನೆಯಲ್ಲಿ ಮದುವೆಯ ಸಂಭ್ರಮ ಇರಬೇಕಿತ್ತು. ಆದರೆ ಸಂಭ್ರಮದ ವಾತಾವರಣ ಇರಬೇಕಾಗಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಪೃಥ್ವಿರಾಜ್ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಕಳೆದ ಹತ್ತು ದಿನಗಳ ಹಿಂದೆಯಷ್ಟೇ ಸ್ವಗ್ರಾಮಕ್ಕೆ ಬಂದಿದ್ದರು. ಬಳಿಕ ಅವರಿಗೆ ಕೋವಿಡ್ ಕಾಣಿಸಿಕೊಂಡಿದ್ದು, ಶಿವಮೊಗ್ಗದ […]