ಯುವಜನತೆ ತಾವು ಬೆಳೆಯುವ ಜೊತೆಗೆ ದೇಶದ ಬೆಳವಣಿಗೆಯ ಸಂಕಲ್ಪ ಮಾಡಬೇಕು: ಶೋಭಾ ಕರಂದ್ಲಾಜೆ

ಉಡುಪಿ: ನೆಹರು ಯುವ ಕೇಂದ್ರ ಉಡುಪಿ ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಗರದ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಬುಧವಾರದಂದು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಖಾತೆ ಸಚಿವ ಶೋಭಾ ಕರಂದ್ಲಾಜೆ, ಯುವ ಜನತೆ ತಾವು ಬೆಳೆಯುವುದರ ಜೊತೆಗೆ ದೇಶದ ಬೆಳವಣಿಗೆಯ ಸಂಕಲ್ಪ ಮಾಡಬೇಕು. ಮೊದಲು ಭಾರತ ದೇಶವನ್ನು ಭೀಕ್ಷುಕರ ದೇಶ, ಬಡವರ ದೇಶ, ಹಾವಾಡಿಗಾರ ದೇಶವೆಂದು ವಿದೇಶಿಗರು ಕರೆಯುತ್ತಿದ್ದರು. ವಿದೇಶಗಳಲ್ಲಿ […]