ಜಿಲ್ಲಾ ಅತ್ಯುತ್ತಮ ಯುವ ಮಂಡಳ ಪ್ರಶಸ್ತಿಗೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ಆಯ್ಕೆ

ಉಡುಪಿ: ಕೇಂದ್ರ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆ, ಉಡುಪಿ ಜಿಲ್ಲೆ ಇವರ ವತಿಯಿಂದ ನೀಡಲಾಗುವ ಜಿಲ್ಲಾ ಅತ್ಯುತ್ತಮ ಯುವ ಮಂಡಳ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಕಾರ್ಕಳ ತಾಲೂಕು ನಂದಳಿಕೆ ಅಬ್ಬನಡ್ಕದ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲವು (ರಿ) ಆಯ್ಕೆಯಾಗಿರುತ್ತದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಅಂತಿಮ ಸುತ್ತಿನಲ್ಲಿ ಮೇಲ್ಕಂಡ ಯುವಕ ಮಂಡಲವು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಪ್ರಶಸ್ತಿಯು 25,000 ರೂ. ನಗದು ಹಾಗೂ ಪ್ರಶಂಸ ಪತ್ರವನ್ನು ಒಳಗೊಂಡಿದ್ದು, […]