ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜನೆ

ಉಡುಪಿ: ಶ್ರೇಷ್ಠವಾದ ರಕ್ತದಾನದಿಂದ ಆಪತ್ತಿನಲ್ಲಿರುವವರ ಜೀವ ರಕ್ಷಣೆ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ. ಹೆಚ್ ಹೇಳಿದರು. ಅವರು ಇಂದು ಚಿಟ್ಪಾಡಿಯ ಸೈಂಟ್ ಮೇರಿಸ್ ಖಾಸಗಿ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ(ರಿ.), ಅಪ್ಪು ಅಭಿಮಾನಿಗಳ ಬಳಗ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಲಯನ್ಸ್ […]

ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ ಪ್ರಯುಕ್ತ ಪ್ರತಿಭಾನ್ವಿತರ ಅಭಿನಂದನಾ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐ.ಟಿ.ಡಿ.ಪಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೊರಗ ಸಂಘಟನೆ ಉಡುಪಿ ಇವರ ಸಹಯೋಗದೊಂದಿಗೆ ‘ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ, 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ, ಮಕ್ಕಳ ಮಾನಸಿಕ ಆರೋಗ್ಯದ ಕುರಿತು ಆತ್ಮ ಸಮಾಲೋಚನೆ ಹಾಗೂ ಎಸ್.ಎಸ್.ಎಲ್.ಸಿ ನಂತರ ಮುಂದೇನು ಎಂಬ ವಿಷಯದ ಕುರಿತ ಮಾಹಿತಿ ಕಾರ್ಯಾಗಾರವು ಶನಿವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ […]

ಜಿಪಂ ಸಿಇಒ ಡಾ. ನವೀನ್‌ ಭಟ್‌ ವರ್ಗಾವಣೆ

ಉಡುಪಿ: ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್‌ ಭಟ್‌ ಅವರನ್ನು ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಕರ್ನಾಟಕ ಭವನ ನವದೆಹಲಿ ಇದರ ಸಹಾಯಕ ಕಮೀಷನರ್‌ ಆಗಿದ್ದ ಪ್ರಸನ್ನ ಎಚ್‌. ಅವರನ್ನು ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ನೇಮಕಗೊಳಿಸಲಾಗಿದೆ.