ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿ ಮತ್ತು ಆಡಳಿತ ಮಂಡಳಿಯಿಂದ ಕೋಟಿ ಕಂಠ ಗಾಯನ

ಉಪ್ಪೂರು: 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ವಿ ಸುನಿಲ್ ಕುಮಾರ್ ಅವರ ನಿರ್ದೇಶನದ ಮೇರೆಗೆ ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಸಿಬ್ಬಂದಿಗಳು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಸಮಸ್ತ ಕನ್ನಡಿಗರ ಒಕ್ಕೊರಳ ಹಾಡಿಗೆ ಸಂಸ್ಥೆಯ ವತಿಯಿಂದ ಧ್ವನಿಗೂಡಿಸಿ ಕನ್ನಡಾಂಬೆಗೆ ನಮನ ಸಲ್ಲಿಸಲಾಯಿತು.
ಅಕ್ಟೋಬರ್ 28 ರಂದು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಏಕಕಂಠದಲ್ಲಿ ಕೋಟಿ ಕಂಠ ಗಾಯನ

ಉಡುಪಿ: ಈ ಬಾರಿಯ 67 ನೇ ಕನ್ನಡ ರಾಜ್ಯೋತ್ಸವವನ್ನು ನಾಡಿನಾದ್ಯಂತ ಸಂಭ್ರಮ, ಉತ್ಸಾಹದಿಂದ ಅತ್ಯಂತ ವಿಶಿಷ್ಠವಾಗಿ ಆಚರಿಸಲು ಉದ್ದೇಶಿಸಿದ್ದು, ಒಂದು ಕೋಟಿಗೂ ಹೆಚ್ಚು ಜನರಿಂದ ಏಕ ಕಾಲದಲ್ಲಿ ಏಕ ಕಂಠದಲ್ಲಿ ಆಯ್ದ 6 ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದ್ದು, ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ನಡೆಯುವ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಮಲ್ಪೆಯ ಸಮುದ್ರ ಮಧ್ಯದಲ್ಲಿ ಸುಮಾರು 130 ಬೋಟುಗಳಲ್ಲಿ 4000 […]