ಬನ್ನಂಜೆ: ಸೆಪ್ಟೆಂಬರ್ 10 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಬನ್ನಂಜೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯು ಸೆಪ್ಟಂಬರ್ 10 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಮಂದಿರದ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. […]