ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ: ಶಾಸಕರಿಂದ ಪೂರ್ವತಯಾರಿ ನಿರೀಕ್ಷಣೆ
ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನವು ಫೆಬ್ರವರಿ 11 ಮತ್ತು 12 ರಂದು ಉಡುಪಿಯ ಎಂ.ಜಿ.ಎಂ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಈ ಹಿನ್ನೆಲೆ ಶಾಸಕ ಕೆ. ರಘುಪತಿ ಭಟ್ ಮಂಗಳವಾರ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಪೂರ್ವ ತಯಾರಿಯ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ ಕಾರ್ಯಾಧ್ಯಕ್ಷ ಡಾ. ಜಿ.ಎಲ್. ಹೆಗಡೆ, ಪ್ರಧಾನ ಸಂಚಾಲಕ ಪಿ.ಕಿಶನ್ ಹೆಗ್ಡೆ, ಸಂಚಾಲಕ ಮುರಳಿ ಕಡೆಕಾರ್, ಸದಸ್ಯರಾದ ನಾರಾಯಣ್ […]