ಜಿಲ್ಲೆಯಲ್ಲಿ ರೆಡ್ ಅಲರ್ಟ್;  ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಹೆಗಲಿಗೆ: ಜಿಲ್ಲಾಧಿಕಾರಿ ಕೂರ್ಮ ರಾವ್

ಉಡುಪಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಮತ್ತು ಮುಂಜಾಗರೂಕತಾ ಕ್ರಮವಾಗಿ ಸ್ಥಳೀಯವಾಗಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಸ್ಥಳೀಯ ಮಳೆಯ ಪ್ರಮಾಣ, ವಿಪತ್ತು ಪರಿಸ್ಥಿತಿಯನ್ನು ಆದರಿಸಿ ಅವಶ್ಯವಿರುವ ಕಡೆಗಳಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಅವಶ್ಯವೆನಿಸಿದ ಶಿಕ್ಷಣ ಸಂಸ್ಥೆಗಳಿಗೆ (ವಿಪತ್ತು ನಿರ್ವಹಣಾ-2005 ಕಾಯಿದೆ ಕಲಂ 26, 30 ಮತ್ತು 34ರಡಿ) ರಜೆಯನ್ನು ಘೋಷಿಸುವ ಕುರಿತು ಕ್ರಮ ವಹಿಸುವಂತೆ ತಾಲೂಕು ತಹಶೀಲ್ದಾರರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ಸೂಚಿಸಿದ್ದಾರೆ.