ಕೊಡವೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ತಾಲೂಕು ಮಟ್ಟದ ಸ್ಪರ್ಧೆಗಳು

ಕೊಡವೂರು: ಕೊಡವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಮಹಿಳೆಯರಿಗೆ ರಂಗವಲ್ಲಿ ಸ್ಪರ್ಧೆ ಭಾನುವಾರ ಶ್ರೀ ಶಂಕರ ನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿ ನಗರಸಭಾ ಸದಸ್ಯ ವಿಜಯ್ ಕೊಡವೂರು ಮಾತನಾಡಿ, ಶಾಲಾ ಮಕ್ಕಳಲ್ಲಿ ಹಾಸುಹೊಕ್ಕಿರುವ ಪ್ರತಿಭೆಯ ಅನಾವರಣಕ್ಕೆ ಸ್ಪರ್ಧೆಗಳು ಸಹಕಾರಿ. ಇಲ್ಲಿನ ಮಣ್ಣಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸ್ಪರ್ಧೆಗಳು ಪೂರಕ ವಾತಾವರಣ ಕಲ್ಪಿಸಬಲ್ಲವು ಎಂದರು.

ದೇವಸ್ಥಾನದ ವ್ಯಸ್ಥಾಪನಾ ಸಮಿತಿ ಸದಸ್ಯೆ ಚಂದ್ರಾವತಿ ಕಾನಂಗಿ ರಂಗವಲ್ಲಿ ಸ್ಪರ್ಧೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಳೆದ 20 ವರ್ಷಗಳಿಂದ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿರುವ ಹಿರಿಯ ಕಲಾವಿದ ತಾರನಾಥ ತೊಟ್ಟಂ ಇವರನ್ನು ಗೌರವಿಸಲಾಯಿತು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೃಷ್ಣ ದೇವಾಡಿಗ, ಯುವಕ ಸಂಘದ ಅಧ್ಯಕ್ಷ ಪ್ರಭಾತ್ ಕೋಟ್ಯಾನ್, ಸಲಹೆಗಾರ ರಮೇಶ್ ಅಮೀನ್ ಉಪಸ್ಥಿತರಿದ್ದರು.

ಸತೀಶ್ ಕೊಡವೂರು ಸ್ವಾಗತಿಸಿ ನಿರೂಪಿಸಿದರು.