ಶ್ರೀ ವೆಂ.ಪ. ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟ; ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಬಾಲಕ ಹಾಗೂ ಬಾಲಕಿಯರ ಥ್ರೋಬಾಲ್ ಪಂದ್ಯಾಟ ಸೆ. 09 ರಂದು ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಜರುಗಿತು.

ಉಡುಪಿ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಜಿಲ್ಲಾಧ್ಯಕ್ಷಜೀವನ್ ಕುಮಾರ್ ಶೆಟ್ಟಿ ಪಂದ್ಯ ಉದ್ಘಾಟಿಸಿ ಮಾತನಾಡಿ, ಥ್ರೋಬಾಲ್ ಪಂದ್ಯಾಟದ ಇಂದಿನ ಗೆಲುವು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ಶುಭ ಹಾರೈಸಿದರು.

ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷ ಸ್ಥಾನ ವಹಿಸಿ ಆರೋಗ್ಯ ಸದೃಢವಾಗಲು ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಸರಸ್ವತಿ ವಿದ್ಯಾಲಯ ಗಂಗೊಳ್ಳಿಯ ದೈಹಿಕ ಶಿಕ್ಷಣ ನಿರ್ದೇಶಕನಾಗರಾಜ ಶೆಟ್ಟಿ, ಕುಂದಾಪುರ ತಾಲೂಕು ಕ್ರೀಡಾ ಸಂಘದ ಸಂಯೋಜಕ ರಾಮ ಶೆಟ್ಟಿ,ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ರಾಗಿಣಿ, ವೆಂಕಟರಮಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ , ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ , ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗಣಿತ ಶಾಸ್ತ್ರ ಉಪನ್ಯಾಸಕ ಸುಜಯ್ ಕೋಟೆಗಾರ್ ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ ನ ಉಪನ್ಯಾಸಕಿ ಸೌಮ್ಯ ಕುಂದರ್ ವಂದಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು.

ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

 

ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಬಾಲಕರ ವಿಭಾಗದ ಥ್ರೋ ಬಾಲ್ ಪಂದ್ಯಾಟದಲ್ಲಿ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.