ಉಡುಪಿ: ಕೃಷಿ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದಲ್ಲಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು – 4 ಹುದ್ದೆಗಳ ನೇಮಕಾತಿಗಾಗಿ, ಕೃಷಿ / ಕೃಷಿ ಸಂಬoಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಎರಡು ವರ್ಷ ಹೆಚ್ಚಿನ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಷರತ್ತಿಗೊಳಪಟ್ಟು ಅರ್ಜಿ ಆಹ್ವಾನಿಸಲಾಗಿದೆ.
ಸದರಿ ನೇಮಕಾತಿಯು 2027 ರ ಮಾರ್ಚ್ 31 ರ ವರೆಗೆ ಅಥವಾ ಕೃಷಿ ಆಯುಕ್ತಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳು ಸರ್ಕಾರಿ ಇಲಾಖೆ/ಸಂಸ್ಥೆಗಳಿoದ ನಿವೃತ್ತಿಯಾಗಿದ್ದಲ್ಲಿ (ಪಿಂಚಣಿ ಪಡೆಯುತ್ತಿದ್ದಲ್ಲಿ), ಸದರಿ ನೇಮಕಾತಿಗೆ ಅರ್ಹರಿರುವುದಿಲ್ಲ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಕಛೇರಿ ವೇಳೆಯಲ್ಲಿ ಅಥವಾ [email protected] or [email protected] ಇ-ಮೇಲ್ ಮುಖಾಂತರ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಜೂನ್ 22 ರ ಸಂಜೆ 5 ಗಂಟೆಯ ಒಳಗಾಗಿ ಸೀಲು ಮಾಡಿದ ಲಕೋಟೆಯಲ್ಲಿ ಮುದ್ದಾಂ/ನೋoದಣಿ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು, ಉಡುಪಿ ಜಿಲ್ಲೆ ಇವರಿಗೆ ಸಲ್ಲಿಸಬೇಕು.
ಲಕೋಟೆಯ ಮೇಲೆ ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಹೆಸರನ್ನು ಸ್ಪಷ್ಟವಾಗಿ ನಮೂದಿಸಿರಬೇಕು. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಅರ್ಹ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಹಾಗೂ ನೇರ ಸಂದರ್ಶನ ಪಕ್ರಿಯೆ ನಂತರ ಆಯ್ಕೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

















