ಉಡುಪಿ: ಶ್ರೀ ಕೃಷ್ಣಮಠದಲ್ಲಿ, ಹರಿ ಶಯನೀ ಏಕಾದಶಿಯಂದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು.
ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು.