TECH YUVA- K24: ಬಂಟಕಲ್ ಮಧ್ವ ವಾದಿರಾಜ ಕಾಲೇಜಿಗೆ ಸಮಗ್ರ ಚಾಂಪಿಯನ್ ಶಿಪ್ ಪ್ರಶಸ್ತಿ

ಉಡುಪಿ: ಶ್ರೀ ಮಧ್ವ ವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಡ್ ಮ್ಯಾನೆಜ್ಮೆಂಟ್ ವಿದ್ಯಾರ್ಥಿಗಳು “TECH YUVA- K24” ನಲ್ಲಿ ಸಮಗ್ರ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಪಡೆದಿದ್ದಾರೆ.

ಈ ಸ್ಪರ್ಧೆಯು ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮಾರ್ಚ್ 26 ಮತ್ತು 27 ರಂದು ನಡೆಯಿತು.

ಸ್ಟ್ಯಾಂಡ್ ಅಪ್ ಕಾಮಿಡಿ, ಪ್ರಾಜೆಕ್ಟ್ ಎಕ್ಸ್ ಪೋ, ಟೆಕ್ನಿಕಲ್ ನಲ್ಲಿ ಪ್ರಥಮ ಸ್ಥಾನ, ರಸಪ್ರಶ್ನೆ ಸ್ಪರ್ಧೆ, ಲೈನ್ ಫಾಲೋವರ್ ಮತ್ತು ಫೋಟೋಗ್ರಫಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ, ಐಡಿಯೇಷನ್‌ನಲ್ಲಿ ದ್ವಿತೀಯ ಸ್ಥಾನ, ಟೇಬಲ್ ಟೆನ್ನಿಸ್‌ನಲ್ಲಿ ತೃತೀಯ ಸ್ಥಾನ
ಪಡೆದಿದ್ದು, ಸಮಗ್ರ ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ, ಉಪ ಪ್ರಾಶುಂಪಾಲ, ಶಿಕ್ಷಕ-ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.