ಅಜೆಕಾರು: ವಿಪರೀತ ಸೆಖೆ ಹಿನ್ನಲೆ ರಾತ್ರಿ ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕರೊಬ್ಬರು ಟೆರೇಸ್ ನಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಅಜೆಕಾರು ಆಶ್ರಯನಗರದಲ್ಲಿ ನಡೆದಿದೆ. ಮೃತರನ್ನು ಕಾರ್ಕಳ ತಾಲೂಕಿನ ಎಣ್ಣೆ ಹೊಳೆ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಸುಂದರ ನಾಯ್ಕ್ (55) ಎಂದು ಗುರುತಿಸಲಾಗಿದೆ.
ಸುಂದರ್ ನಾಯ್ಕ್ ರಾತ್ರಿ ಸುಮಾರು 10:30 ರ ವೇಳೆಗೆ ಟೆರೇಸ್ ಮೇಲೆ ಮಲಗಲು ತೆರಳಿದ್ದರು. ಬೆಳಿಗ್ಗೆ 6:30 ವೇಳೆಗೆ ಗಮನಿಸಿದಾಗ ಟೆರೇಸ್ ಮೇಲಿಂದ ಕೆಳಗೆ ಬಿದ್ದಿರೋದು ಬೆಳಕಿಗೆ ಬಂದಿದೆ. ಗಾಢ ನಿದ್ರೆಯಲ್ಲಿ ಆಯತಪ್ಪಿ ಟೆರೇಸ್ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿರುವುದಾಗಿ ಶಂಕೆ ವ್ಯಕ್ತವಾಗಿದೆ.
ಪ್ರಕರಣದ ತನಿಖೆ ನಡೆಯುತ್ತಿದೆ.