ಬೆಂಗಳೂರು: ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ. 3ರಿಂದ 26ರ ವರೆಗೆ ನಿಗದಿಪಡಿಸಿದ್ದ ಮಧ್ಯಂತರ ರಜೆಯನ್ನು ರದ್ದುಪಡಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
2020–21ನೇ ಸಾಲಿನ ಶೈಕ್ಷಣಿಕ ಅವಧಿ ಮತ್ತು ಮಧ್ಯಂತರ ರಜೆ ನಿಗದಿಪಡಿಸಿ ಫೆಬ್ರುವರಿ 14ರಂದು ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಲಾಗಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಯ ಕುರಿತು ಇಲಾಖೆಯಿಂದ ವಿವಿಧ ಹಂತಗಳಲ್ಲಿ ಜಾರಿಗೊಳಿಸುವ ಆದೇಶಗಳಂತೆ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ಇಲಾಖೆ ಸೂಚಿಸಿದೆ.












