ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಗುರು ನಮನ ಕಾರ್ಯಕ್ರಮ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಸರ್ವೇಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆ ಪ್ರಯುಕ್ತ ಶಿಕ್ಷಕರ ದಿನಾಚರಣೆ- ಗುರು ನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ‌ ಹಾಗೂ ಪ್ರಾಂಶುಪಾಲ ಗಣೇಶ‌ ಮೊಗವೀರ್ ವಹಿಸಿದ್ದರು. ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಜೀವನದಲ್ಲಿ ಉತ್ತಮ ಗುಣಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಯಾಗುವಂತೆ ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸರ್ಕಾರಿ ಪ್ರೌಢಶಾಲೆ ಸಿದ್ಧಾಪುರದ ಸಹ ಶಿಕ್ಷಕಿ ಶ್ರೀಮತಿ ವಸಂತಿ ಭಟ್ ಶಿಕ್ಷಕ-ಶಿಕ್ಷಣ-ವಿದ್ಯಾರ್ಥಿ ಈ ಕುರಿತು ಮಾತನಾಡಿದರು.

ಪ್ರಗತಿ ಮಹಿಳಾ ವಿವಿಧೋದ್ದೇಶ ಕೋ-ಆಪರೇಟಿವ್ ಸೊಸೈಟಿ ಹಾಗೂ ಜನತಾ ಪ್ರೌಢ ಶಾಲೆ ಹೆಮ್ಮಾಡಿಯ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂದಿನ ಈ ಸ್ಪರ್ಧಾತ್ಮಕ ಯುಗದಲ್ಲಿ ಅತ್ಯುತ್ತಮ ಸೌಲಭ್ಯವಿರುವ ಕಾಲೇಜು ಹಾಗೂ ಪರಿಣಿತ ಉಪನ್ಯಾಸಕರು ಲಭಿಸಿರುವುದರಿಂದ ಅದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿ ಶುಭ‌ ಹಾರೈಸಿದರು.

ಕಾರ್ಯಕ್ರಮದಲ್ಲಿ ಬೋಧಕ,ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಅಭಿಜಿತ್ ಅತಿಥಿಗಳನ್ನು ಪರಿಚಯಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಹರ್ಷ ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಕು. ಪ್ರಿಯಾಂಕ ವಂದಿಸಿದರು. ಕನ್ನಡ ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.