ಬ್ರಹ್ಮಾವರ: ಡಾ. ಸರ್ವಪಳ್ಳಿ ರಾಧಾಕೃಷ್ಣನ್ ರವರು ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ ಎನ್ನುತ್ತಿದ್ದರು. ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ. ವಿದ್ಯಾಲಕ್ಷ್ಮೀ ಸಮೂಹ ಸಂಸ್ಥೆಯಲ್ಲಿ ಸೋಮವಾರದಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯರವರು ಉಪನ್ಯಾಸಕರಿಗೆ ಶುಭಾಶಯ ಕೋರಿದರು.
ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲೆ ಶ್ರೀಮತಿ ಡಾ. ಸೀಮಾ ಭಟ್ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.
ವಾಣಿಜ್ಯ ವಿಭಾಗದ ಉಪನ್ಯಾಸಕಿ ಕು.ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.