ಬೆಂಗಳೂರು: ಟೀಂ ಇಂಡಿಯಾ ಅಡಿಲೇಡ್ ಓವಲ್ ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ನಾಯಕ ಕೊಹ್ಲಿ ಭರ್ಜರಿ ಶತಕ ಬಾರಿಸಿದರೆ, ಮಾಜಿ ನಾಯಕ ಎಂಎಸ್ ಧೋನಿ ಅವರು ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೇ ನಾಯಕ ಕೊಹ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಏಕದಿನ ಕ್ರಿಕೆಟ್’ನಲ್ಲಿ ಶತಕ ಸಿಡಿಸಿದ ಭಾರತದ ಮೊದಲ ನಾಯಕ ಎನ್ನುವ ಕೀರ್ತಿಗೂ ಭಾಜನರಾಗಿದ್ದಾರೆ.
ದೇಶದಾದ್ಯಂತ ಇಂದು ಅತ್ಯಂತ ಸಡಗರ-ಸಂಭ್ರಮದಿಂದ ಮಕರ ಸಂಕ್ರಾಂತಿ ಹಾಗೂ 71ನೇ ಆರ್ಮಿ ದಿನಾಚರಣೆ[ಸೈನಿಕರ ದಿನಾಚರಣೆ] ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಭಾರತ 2019ರಲ್ಲಿ ಚೊಚ್ಚಲ ಏಕದಿನ ಗೆಲುವು ದಾಖಲಿಸಿದೆ. ಇದರ ಜತೆಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್, ಏಕದಿನ ಹಾಗೂ ಟಿ20 ಪಂದ್ಯವನ್ನು ಗೆಲುವಿನತ್ತ ಮುನ್ನಡೆಸಿದ ಭಾರತದ ಮೊದಲ ನಾಯಕ ಎನ್ನುವ ಖ್ಯಾತಿಗೂ ಕೊಹ್ಲಿ ಭಾಜನರಾಗಿದ್ದಾರೆ.