ಕಾರ್ಕಳ: ತಾಲೂಕಿನ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕಿನ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಅ.9 ರಿಂದ ನವೆಂಬರ್ ಅಂತ್ಯದವರೆಗೆ ಕಾಲಾವಕಾಶ ಬೇಕಾಗಿರುವುದರಿಂದ ಅಲ್ಲಿಯವರೆಗೆ ಥೀಂ ಪಾರ್ಕ್ ಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಕಾರ್ಕಳ ತಾಲೂಕು ತಹಸೀಲ್ದಾರ್ ಅವರ ಪ್ರಕಟಣೆ ತಿಳಿಸಿದೆ.












