ತೆಂಕನಿಡಿಯೂರು: ಸಹಾಯ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಸಾಧಕರಿಗೆ ಸನ್ಮಾನ

ಮಲ್ಪೆ: ಸಹಾಯ ಸೌಹಾರ್ದ ಸಹಕಾರಿ ನಿಯಮಿತ ಇದರ ತೆಂಕನಿಡಿಯೂರು ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಸಮಾಜ ಸೇವಕರಾದ ವಿಶು ಶೆಟ್ಟಿ ಅಂಬಲಪಾಡಿ, ಮುಳುಗು ತಜ್ಞ ಈಶ್ವರ್ ಮಲ್ಪೆ ನಿತ್ಯಾನಂದ ಒಳಕಾಡು ಅವರನ್ನು ಸಹಕಾರಿ ಸಂಘದ ವತಿಯಿಂದ ಸಮ್ಮಾನಿಸಲಾಯಿತು.

ದ.ಕ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ನ ಅಧ್ಯಕ್ಷ ಯಶ್ ಪಾಲ್ ಸುವರ್ಣ, ತೊಟ್ಟಂ ಸೈಂಟ್ ಆನ್ಸ್ ಚರ್ಚ್ ಧರ್ಮಗುರು ಫಾ| ಡೆನಿಸ್ ಡೇಸಾ, ಜಿಲ್ಲಾ ಕೋ- ಆಪರೇಟಿವ್ ಯೂನಿಯನ್ ಅಧ್ಯಕ್ಷ ಬಿ. ಜಯಕರ್ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿ ಸಂಘದ ನಿರ್ದೇಶಕ ಮಂಜುನಾಥ್ ಎಸ್.ಕೆ., ತೆಂಕನಿಡಿಯೂರು ಗ್ರಾ.ಪಂ ಅಧ್ಯಕ್ಷೆ ಗಾಯತ್ರಿ, ಸದಸ್ಯ ಪ್ರಶಾಂತ್ ಹೆಬ್ಬಾರ್, ಸಮಾಜ ಸೇವಕಿ ವೆರೋನಿಕಾ ಕರ್ನೇಲಿಯೋ, ಬೆಳ್ಕಳೆ ಮಹಾಲಿಂಗೇಶ್ವರ ದೇವಸ್ಥಾನದ ದೇವಸ್ಥಾನ ಸಮಿತಿಯ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ ಕಿನ್ನಿ ಮೂಲ್ಕಿ, ಸಹಾಯ ಸಹಕಾರಿ ಅಧ್ಯಕ್ಷ ವಲೇರಿಯನ್ ಆರ್. ಫೆರ್ನಾಂಡಿಸ್, ಉಪಾಧ್ಯಕ್ಷೆ ಆರ್.ಬಿ. ಬೀನಾ ಲೂವಿಸ್, ನಿರ್ದೇಶಕರಾದ ಟಿ. ರಾಘವೇಂದ್ರ ರಾವ್, ಥೋಮಸ್ ಕರ್ನೇಲಿಯೋ, ಕ್ರಿಸ್ಟಿನ್ ಕರ್ನೇಲಿಯೋ, ಲೂಕ್ ಡಿ’ಸೋಜಾ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಾನಸ ಮಧ್ಯಸ್ಥ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.