ತೆಂಕನಿಡಿಯೂರು : ಮಾದಕ ದ್ರವ್ಯದ ದುಷ್ಪರಿಣಾಮಗಳು – ಉಪನ್ಯಾಸ

ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು  ಇಲ್ಲಿನ ಆಪ್ತ ಸಮಾಲೋಚನೆ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಇತ್ತೀಚೆಗೆ ಮಾದಕ ದ್ರವ್ಯದ ದುಷ್ಪರಿಣಾಮಗಳು ಎನ್ನುವ ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

    ಸಂಪನ್ಮೂಲ ವ್ಯಕ್ತಿಗಳಾಗಿ ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ, ನೈಜ ಘಟನೆಗಳ ನಿದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮಗಳ ಸಂಪೂರ್ಣ ಮಾಹಿತಿಯನ್ನು ನೀಡಿದರು.

    ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಇತ್ತೀಚಿಗಿನ ದಿನಗಳಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳನ್ನು ನಡೆಸುವುದು ಬಹಳ ಅಗತ್ಯವಾಗಿದೆ ಎಂದರು.

    ಆಪ್ತ ಸಲಹಾ ಘಟಕದ ಸದಸ್ಯ ಡಾ.ಗೋಪಾಲಕೃಷ್ಣ ಎಂ.ಗಾಂವ್ಕರ್ ಉಪಸ್ಥಿತರಿದ್ದರು. ಆಪ್ತ ಸಮಾಲೋಚನಾ ಘಟಕ ಪದವಿ ವಿಭಾಗದ ಸಂಯೋಜಕಿ ಪ್ರೊ.ರತ್ನಮಾಲಾ ಸ್ವಾಗತಿಸಿದರು. ದ್ವಿತೀಯ ಎಂ.ಎ.ಇಂಗ್ಲೀಷ್‍ನ ರಸಿಕ್ ವಂದಿಸಿದರು. ಆಪ್ತ ಸಮಾಲೋಚನಾ ಘಟಕ ಸ್ನಾತಕೋತ್ತರ ವಿಭಾಗದ ಸಂಯೋಜಕಿ ಪ್ರೊ.ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು.