ವಿಶಾಖಪಟ್ಟಣಂ: ಸೌತ್ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಆಟಗಾರ ಕನ್ನಡಿಗ ಮಯಾಂಕ್ ಅಗರ್ವಾಲ್ ಚೊಚ್ಚಲ ದ್ವಿಶಕ ಸಿಡಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.
ಈ ಹಿಂದೆ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ದ ಸಿಡಿಸಿದ 77 ರನ್ ಸಿಡಿಸಿದ್ದು, ಮಯಾಂಕ್ ಅವರ ಬೆಸ್ಟ್ ಸ್ಕೋರ್ ಆಗಿತ್ತು. ಇದೀಗ 215 ಸಿಡಿಸುವ ಮೂಲಕ ಭಾರತ ತಂಡದ ಆರಂಭಿಕ ಸಮಸ್ಯೆಗೆ ಮುಕ್ತಿ ಹಾಡಿದ್ದಾರೆ. ಅಲ್ಲದೇ ಇವರ ಈ ಸಾಧನೆಗೆ ಕ್ರಿಕೆಟ್ ದಿಗ್ಗಜರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.












