ಬೆಂಗಳೂರು: ಜೆಡಿಎಸ್ ಜತೆಗೆ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್ ಭಾರಿ ಹಿನ್ನಡೆ ಅನುಭವಿಸುವಂತಾಯಿತು. ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋಲಲು ಮೈತ್ರಿಯೇ ಮುಖ್ಯ ಕಾರಣ. ಹಾಗಾಗಿ ಇನ್ಮುಂದೆ ಯಾವ ಮೈತ್ರಿಯೂ ಇಲ್ಲದೆ ಪಕ್ಷವು ಒಗ್ಗಟ್ಟಿನಿಂದ ಮುನ್ನಡೆಯಬೇಕು ಎಂದು ಕೆಪಿಸಿಸಿ ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಅಧಿಕಾರ ಸ್ವೀಕರಿಸುವ ಸಮಾರಂಭದಲ್ಲಿ ಮಾತನಾಡಿದರು.
ಎಲ್ಲ ನಾಯಕರು ಜತೆಗೂಡಿದ್ದು, ಪಕ್ಷವು ಇಂದು ಒಗ್ಗಟ್ಟಿನಿಂದಿದೆ. ಪಕ್ಷವನ್ನು ಸಂಘಟಿತವಾಗಿ ಮುನ್ನಡೆಸುವ ಸಾಮರ್ಥ್ಯವನ್ನು ಡಿ.ಕೆ.ಶಿವಕುಮಾರ್ ಹೊಂದಿದ್ದು, ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಒಳ್ಳೆಯ ದಿನಗಳು ಬರುವುದು ನಿಶ್ಚಿತ ಎಂದು ಅವರು ತಿಳಿಸಿದರು.