ಕೋಲ್ಕತ್ತಾ: ‘ದಿ ಬೆಂಗಾಲ್ ಫೈಲ್ಸ್’ನ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಶನಿವಾರ ಕೋಲ್ಕತ್ತಾ ಪೊಲೀಸರು ತಡೆದಿದ್ದಾರೆ ಎಂದು ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಹೇಳಿದ್ದಾರೆ.
ಮಹಾನಗರದ ಪಂಚತಾರಾ ಹೋಟೆಲ್ನಲ್ಲಿ ಆ.16 ರಂದು ಮಧ್ಯಾಹ್ನ ‘1946ರ ಕೋಲ್ಕತ್ತ ಗಲಭೆಯ ಕುರಿತು ನೈಜ ಘಟನೆಯಾಧಾರಿತ ಸಿನಿಮಾ ‘ದಿ ಬೆಂಗಾಲ್ ಫೈಲ್ಸ್’ನ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಪೊಲೀಸರು ಇದನ್ನು ತಡೆದಿದ್ದಾರೆ ಎಂದು ಸಿನಿಮಾ ನಿರ್ದೇಶಕರು ಆರೋಪಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಸೆನ್ಸಾರ್ ಮಂಡಳಿ ಚಿತ್ರಕ್ಕೆ ಅನುಮತಿ ನೀಡಿದ್ದರಿಂದ ಮತ್ತು “ಕಲ್ಕತ್ತಾ ಹೈಕೋರ್ಟ್ ಅದರ ಮೇಲಿನ ನಿಷೇಧಕ್ಕೆ ತಡೆ ನೀಡಿದೆ”. ಹಾಗಿದ್ದರೂ ಕಾರ್ಯಕ್ರಮದ ಮೇಲೆ ನಿರ್ಬಂಧ ವಿಧಿಸಿರುವುದು ಜನರ ಪ್ರಜಾಪ್ರಭುತ್ವ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ಅಗ್ನಿಹೋತ್ರಿ ಕಿಡಿ ಕಾರಿದ್ದಾರೆ.
1940ರ ದಶಕದಲ್ಲಿ ಅವಿಭಜಿತ ಬಂಗಾಳದಲ್ಲಿ ನಡೆದ ಕೋಮು ಹಿಂಸಾಚಾರವನ್ನು ಆಧರಿಸಿ ದಿ ಬೆಂಗಾಲ್ ಫೈಲ್ಸ್ ಸಿನಿಮಾ ಮಾಡಲಾಗಿದೆ.












