ಉಡುಪಿ: ಕೊರೊನಾ ಸಂಕಷ್ಟದ ಸಮಯದಲ್ಲಿ ಕೂಡ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರಿಗೆ ಮಾರಕವಾಗುವ ಮಸೂದೆಗಳನ್ನು ಜಾರಿಗೊಳಿಸಿ, ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುವ ಕೆಲಸ ಮಾಡುತ್ತಿದೆ. ಬೆಲೆ ಏರಿಕೆಯಿಂದ ಜನರ ಜೀವನ ದುಸ್ತರವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆರೋಪಿಸಿದರು.
ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದರು.
ಸರ್ಕಾರವು ಕೊರೊನಾ ಹೆಸರಿನಲ್ಲಿ ಜನರ ಹಣ ಲೂಟಿ ಹೊಡೆಯುತ್ತಿದೆ. ಜನ ವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಿ ಜನರನ್ನು ಸಂಕಷ್ಟದ ಸುಳಿಗೆ ಸಿಲುಕಿಸುತ್ತಿದ್ದಾರೆ. ಇದನ್ನು ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಜನರಿಗೆ ಮನವರಿಕೆ ಮಾಡುವ ಕೆಲಸ ಮಾಡಬೇಕು ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು.
ಪಕ್ಷದ ಮುಖಂಡರಾದ ದಿನೇಶ್ ಪುತ್ರನ್, ನೀರೆ ಕೃಷ್ಣ ಶೆಟ್ಟಿ, ಬಿ. ನರಸಿಂಹ ಮೂರ್ತಿ, ನವೀನ್ಚಂದ್ರ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಕುಶಲ್ ಶೆಟ್ಟಿ, ಅಣ್ಣಯ್ಯ ಶೇರಿಗಾರ್, ಕೀರ್ತಿ ಶೆಟ್ಟಿ, ಜ್ಯೋತಿ ಹೆಬ್ಬಾರ್, ಶಬ್ಬೀರ್ ಅಹ್ಮದ್, ಪ್ರಖ್ಯಾತ್ ಶೆಟ್ಟಿ, ಮುರಳಿ ಶೆಟ್ಟಿ, ರೋಶನಿ ಒಲಿವರ್, ಪ್ರಶಾಂತ್ ಜತ್ತನ್ನ, ಹರೀಶ್ ಶೆಟ್ಟಿ ಪಾಂಗಾಳ, ಮಂಜುನಾಥ ಪೂಜಾರಿ, ಸದಾಶಿವ ದೇವಾಡಿಗ, ವೈ. ಸುಕುಮಾರ್, ಲೂಯಿಸ್ ಲೋಬೋ, ಸೌರಬ್ ಬಲ್ಲಾಳ್, ಶಶಿಧರ ಶೆಟ್ಟಿ ಎಲ್ಲೂರು, ಉದ್ಯಾವರ ನಾಗೇಶ್ ಕುಮಾರ್, ಪೀರು ಸಾಹೇಬ್, ಉಪೇಂದ್ರ ಗಾಣಿಗ, ಕಿಶೋರ್ ಎರ್ಮಾಳ್, ಜನಾರ್ದನ ಭಂಡಾರ್ಕಾರ್ ಮೊದಲಾದವರು ಉಪಸ್ಥಿತರಿದ್ದರು.